ಹೋರಾಟದಲ್ಲಿ ಮೃತಪಟ್ಟ ರೈತರಿಗೆ 1ಕೋಟಿ ಪರಿಹಾರ ನೀಡಿ ರೈತ ಸಂಘದಿಂದ ಒತ್ತಾಯ.
(KOLARA): ಬಂಗಾರಪೇಟೆ: ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿ ಮೃತಪಟ್ಟಿರುವ ರೈತ ಕುಟುಂಬಗಳಿಗೆ 1 ಕೋಟಿ ಪರಿಹಾರ ವಿತರಣೆ ಮಾಡಿ ರೈತರೊಡನೆ ಶಾಂತಿಯುತವಾಗಿ ಮಾತುಕತೆ ನಡೆಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ರೈತ ಸಂಘದಿAದ ರಾಜ್ಯ ಹೆದ್ದಾರಿ ಹಂಚಾಳ ಗೇಟ್ ಬಂದ್ ಮಾಡಿ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ಕೃಷಿ ಕ್ಷೇತ್ರದಲ್ಲಿ ಶೇ.60 ರಷ್ಟು ಉದ್ಯೋಗ ಸೃಷ್ಟಿ ಮಾಡಿ ರಾತ್ರಿ ಹಗಲು ಬೆವರು ಸುರಿಸಿ ದೇಶಕ್ಕೆ ಅನ್ನ ಹಾಕುವ ಅನ್ನದಾತನ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕಾದ ಸರ್ಕಾರ ನೊಂದ ರೈತರ ಮೇಲೆ ಪೋಲಿಸ್ ರ ಮೂಲಕ ದಬ್ಬಾಳಿಕೆ ಮಾಡುವ ಮುಖಾಂತರ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿದ್ದಾರೆಂದು ರೈತ ಸಂಘದ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ರೈತ ವಿರೋದಿ ದೋರಣೆಯನ್ನು ಖಂಡಿಸಿದರು.
ಉದ್ಯೋಗ ಸೃಷ್ಠಿ ನೆಪದಲ್ಲಿ ಕೃಷಿ ಭೂಮಿಯನ್ನು ಕಬಳಿಸುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಾವಿರಾರು ಕೋಟಿ ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ಮೋಸು ಮಸ್ತಿಗಾಗಿ ದೇಶ ಬಿಟ್ಟು ಹೋಗುವ ಉದ್ಯಮಿಗಳಿಗೆ ರಕ್ಷಣೆ ನೀಡಿ ಸಾಲ ಮನ್ನಾ ಮಾಡುವ ಸರ್ಕಾರಗಳು ರೈತರು ಬೆಳೆದ ಅನ್ನ ತಿಂದು ರೈತರ ಮೇಲೆಯೇ ದಬ್ಬಾಳಿಕೆ ಮಾಡಿದರೆ ಅನ್ನಕ್ಕಾಗಿ ರೈತರ ಕಾಲು ಹಿಡಿಯುವ ಕಾಲ ದೂರವಿಲ್ಲವೆಂದು ಸರ್ಕಾರಗಳಿಗೆ ಮನವರಿಕೆ ಮಾಡಿದರು.
ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಹಿಂದೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಸಂಬAದಿತ 3 ಕಾಯ್ದೆಗಳನ್ನು ಹಿಂಪಡೆಯುವAತೆ ರೈತರು ದೆಹಲಿ ಗಡಿಯಲ್ಲಿ 1 ವರ್ಷಕ್ಕೆ ಹೆಚ್ಚು ಕಾಲ ದರಣಿ ನಡೆಸಿದರೂ ಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ವಾಪಸ್ ಪಡೆದಿಲ್ಲ ಜೊತೆಗೆ ಡಾ|| ಎಂ.ಎಸ್, ಸ್ವಾಮಿನಾಥ್‌ನ್ ವರದಿಯಂತೆ ಬೆಂಬಲ ಬೆಲೆ, ಪಿಂಚಣಿ ಸೇರಿದಂತೆ ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಇನ್ನೆಷ್ಟು ಅನ್ನದಾತರ ಬಲಿಬೇಕು ಎಂದು ಪ್ರಶ್ನೆ ಮಾಡಿದರು.
24 ಗಂಟೆಯಲ್ಲಿ ರೈತರ ಸಮಸ್ಯೆಯನ್ನು ಗಂಬೀರವಾಗಿ ಪರಿಗಣಿಸಿ ಶಾಂತಿಯುತ ಮಾತುಕತೆ ಮುಖಾಂತರ ಬಗೆಹರಿಸಿ ಮೃತ ರೈತ ಕುಟುಂಬಗಳಿಗೆ 1 ಕೋಟಿ ಪರಿಹಾರ ಮಾಡದೇ ಇದ್ದರೆ ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ರೈತರ ಶಕ್ತಿ ಪ್ರದರ್ಶನ ತೋರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆಯೊಂದಿಗೆ ತಹಶೀಲ್ದಾರ್ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಉಪ ತಹಶೀಲ್ದಾರ್ ಪ್ರಭಾಕರ್ ರವರು ನಿಮ್ಮ ಮನವಿಯನ್ನು ಮೇಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಕಳುಹಿಸುವ ಭರವಸೆ ನೀಡಿದರು.
ಹೋರಾಟದಲ್ಲಿ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ, ತಾ.ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಕಿರಣ್, ಚಾಂದ್‌ಪಾಷ, ಬಾಬಾಜಾನ್,. ಮುನಿಕೃಷ್ಣ, ಮುನಿರಾಜು, ವಿಶ್ವ, ಗೋವಿಂದಪ್ಪ ಲಕ್ಷಣ್, ಶ್ರೀರಾಮ್, ಗುಲ್ಲಟ್ಟಿ ರಾಮಕೃಷ್ಣಪ್ಪ, ಗಣೇಶ್, ತಿಮ್ಮಣ್ಣ, ಗಿರೀಶ್, ರಾಮಸಾಗರ ವೇಣು, ಮುಂತಾದವರು ಇದ್ದರು.
ವರದಿ: ವಿಷ್ಣು ಕೋಲಾರ