ಕೋಲಾರಕ್ರೈಂ ನ್ಯೂಸ್

ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡ ಹೋದ ಮಗು ಮನೆಯಲ್ಲಿ ಸಾವು.

ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡ ಹೋದ ಮಗು ಮನೆಯಲ್ಲಿ ಸಾವು.

(KOLARA): ಬಂಗಾರಪೇಟೆ :ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡು ಹೋದ ಮಗು ಮನೆಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ದುರ್ದೈವಿ ಭೂಮಿಕ 9 ತಿಂಗಳ ಮಗುವಾಗಿದೆ. ತಾಲೂಕಿನ ದೊಡ್ಡ ವಲಗಮಾದಿ ಮುರುಳಿ ರವರ ಮಗಳೆಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ 12 ಗಂಟೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡು ಮನೆಗೆ ತೆರುಳಿದ್ದಾರೆ. ಮಧ್ಯಾಹ್ನ 1:00 ಸಮಯದಲ್ಲಿ ಮಲಗಿದ ಮಗು ಎದ್ದೇಳಲಿಲ್ಲ, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಬಂದ ಸಂದರ್ಭದಲ್ಲಿ ಮಗು ಸಾವನ್ನಪ್ಪಿರುವುದು ಕಂಡು ಬಂದಿದೆ.

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code