ಕೋಲಾರನ್ಯೂಸ್

ಪಟ್ಟಣದ ಬೂದಿಕೋಟೆ ಸರ್ಕಲ್ ನಲ್ಲಿ ದ್ವಿಚಕ್ರ ವಾಹನಕ್ಕೆ ಕಾರುಡಿಕ್ಕಿ ಸ್ಥಳದಲ್ಲೇ ವ್ಯಕ್ತಿ ಸಾವು

ಪಟ್ಟಣದ ಬೂದಿಕೋಟೆ ಸರ್ಕಲ್ ನಲ್ಲಿ ದ್ವಿಚಕ್ರ ವಾಹನಕ್ಕೆ ಕಾರುಡಿಕ್ಕಿ ಸ್ಥಳದಲ್ಲೇ ವ್ಯಕ್ತಿ ಸಾವು



(KOLARA): ಬಂಗಾರಪೇಟೆ: ಪಟ್ಟಣದ ಬೂದಿಕೋಟೆ ಸರ್ಕಲ್ ನಲ್ಲಿ ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತದುರ್ದೈವಿ ವಿನಯ್ 32 ವರ್ಷ ಪಟ್ಟಣದ ಗೌತಮ್ ನಗರದ ನಿವಾಸಿ ಎಂದು ತಿಳಿದು ಬಂದಿದೆ. ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಪಟ್ಟಣದ ಬೂದಿಕೋಟೆ ಸರ್ಕಲ್ ನಲ್ಲಿ ಅತಿ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ್ದು ಗಮನಿಸಿ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ.


ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code