ದ್ವಿಚಕ್ರ ವಾಹನ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು
(KOLARA): ಬಂಗಾರಪೇಟೆ :ತಾಲೂಕಿನ ಎಳೆಸಂದ್ರ ಬಳಿ ದ್ವಿಚಕ್ರ ವಾಹನ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿರುವ ಘಟನೆ ನಡೆದಿದೆ.
ಮೃತದುರ್ದೈವಿ ಮಧು ಸುಮಾರು 25 ವರ್ಷದ ಯುವಕನಾಗಿದ್ದಾನೆ, ತಾಲೂಕಿನ ಗುಲ್ಲಹಳ್ಳಿ ಗ್ರಾಮದವರೆಂದು ತಿಳಿದು ಬಂದಿದೆ. ಕಾಮಸಮುದ್ರದಿಂದ ಬೂದಿಕೋಟೆ ಕಡೆ ಬರುತ್ತಿದ್ದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಿಂದ ಲಾರಿ ಸಮೇತ ಪರಾರಿಯಾಗಿದ್ದಾನೆ.
ಬೂದಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ವಿಷ್ಣು ಕೋಲಾರ