News & Updatesದಕ್ಷಿಣಕನ್ನಡ

ಶಾಲಾ ಮಕ್ಕಳ ಆಟೋ ರಿಕ್ಷಾ ಪಲ್ಟಿ ಹೊಡೆದು – ವಿದ್ಯಾರ್ಥಿಗಳಿಗೆ ಗಾಯ:

ಶಾಲಾ ಮಕ್ಕಳ ಆಟೋ ರಿಕ್ಷಾ ಪಲ್ಟಿ ಹೊಡೆದು – ವಿದ್ಯಾರ್ಥಿಗಳಿಗೆ ಗಾಯ:

(ಉಪ್ಪಿನಂಗಡಿ): ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾವೊಂದು ಮಗುಚಿ ಬಿದ್ದು 9 ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂರುಗೋಳಿ ಬಳಿ ಸೆ. 11ರಂದು ಬೆಳಗ್ಗೆ ಸಂಭವಿಸಿದೆ.

ಕಲ್ಲೇರಿ ಆಸುಪಾಸಿನಿಂದ-ಮೂಡಡ್ಕದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಆಟೋ ರಿಕ್ಷಾಕ್ಕೆ ಮೂರುಗೋಳಿ ಬಳಿ ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡ ಆಟೋ ರಿಕ್ಷಾ ಮಗುಚಿ ಬಿದ್ದಿದೆ. ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 9 ವಿದ್ಯರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಆಟೋ ಪಲ್ಟಿ ಹೊಡೆದ ರಭಸಕ್ಕೆ ಆಟೋ ಪೂರ್ತಿಯಾಗಿ ನಾಜುಗುಜಾಗಿದೆ.

Leave a Reply

Your email address will not be published. Required fields are marked *

Scan the code