ಕೋಲಾರನ್ಯೂಸ್

ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿದ ಸಿಡಿಪಿಓ ಮುನಿರಾಜು

ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿದ ಸಿಡಿಪಿಓ ಮುನಿರಾಜು



(KOLARA): ಬಂಗಾರಪೇಟೆ :ಮಕ್ಕಳ ಉತ್ತಮ ಭವಿಷ್ಯವೇ.ದೇಶದ ಭವಿಷ್ಯ ಎಂಬ ದೂರದೃಷ್ಠಿಯ ಹಿನ್ನೆಲೆಯಲ್ಲಿ, ಮಹಿಳಾ ಮತ್ತು ಮಕ್ಕಳ ಇಲಾಖೆಯು ಮಕ್ಕಳ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಡಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅವುಗಳ ನೀತಿ ಮತ್ತು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸರ್ಕಾರ  ಹೆಚ್ಚು ಒತ್ತು ನೀಡಿ ಶ್ರಮಿಸುತ್ತಿದೆ ಎಂದು ಸಿಡಿಪಿಓ ಮುನಿರಾಜು ಅಭಿಪ್ರಾಯ ಪಟ್ಟರು.

ತಾಲೂಕಿನ ಬಲಮಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸರ್ಕಾರ ಹಲವು ದೂರದೃಷ್ಟಿಯ ಯೋಜನೆಗಳನ್ನು ಜಾರಿಗೆ ತಂದಿದೆ ,ಅವುಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಬದ್ಧವಾಗಿದೆ.ಮಗುವಿನ ದೈಹಿಕ,ಮಾನಸಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಭದ್ರ ಅಡಿಪಾಯ ಹಾಕುವ ನಿಟ್ಟಿನಲ್ಲಿ ಅನೇಕ ಯೋಜನೆಗಳು ಜಾರಿಯಲ್ಲಿದೆ ವಿಪರ್ಯಾಸ ಗಡಿಭಾಗದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ಒಂದಲ್ಲ ಒಂದು ಆರೋಪ ಕೇಳಿ ಬರುತ್ತಲೇ ಇರುತ್ತದೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭೇಟಿ ನೀಡಲಾಗಿದೆ, ಹಾಗೂ ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿ ,‌ ಪೌಷ್ಟಿಕ ಆಹಾರ ವಿತರಣೆ, ಮತ್ತು ಕಾರ್ಯಕರ್ತೆಯರ ಕಾರ್ಯವೈಖರಿಯನ್ನು ಪರಿಶೀಲಿಸಲಾಗಿದೆ, ಎಂದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code