ಉದ್ಯಮಿಗೆ ವಿಧಾನಸಭಾ ಟಿಕೆಟ್ ಕೊಡಿಸುವುದಾಗಿ ನಂಬಿಸಿ 4 ಕೋಟಿ ವಂಚಿಸಿದ : ಚೈತ್ರ ಕುಂದಾಪುರ
ಉಡುಪಿ) : ಕಳೆದ ದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈಕೆಯ ಜೊತೆಗೆ ಮತ್ತಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಸದ್ಯ ಪ್ರಕರಣದಲ್ಲಿ ಚೈತ್ರಳ ಜೊತೆಗೆ ಪ್ರಸಾದ್,ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ, ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ. ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ತಲೆ ಮರೆಸಿಕೊಂಡಿದ್ದ ಚೈತ್ರಳನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.