ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಪ್ರಪಂಚದಲ್ಲೇ ಅತ್ಯುನ್ನತ ಸಂವಿಧಾನ
(KOLARA): ಬಂಗಾರಪೇಟೆ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಪ್ರಪಂಚದಲ್ಲೇ ಅತ್ಯುನ್ನತ ಸಂವಿಧಾನವಾಗಿದೆ ಎಂದು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಹೇಳಿದರು.
ಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಪಟ್ಟಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಪುತ್ಥಳಿಗೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮೇಣದ ಬತ್ತಿಯನ್ನು ಹಚ್ಚಿ ಮೌನ ಆಚರಿಸಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಬರೆಯದೆ ಹೋಗಿದ್ದರೆ.ಎಂದಿಗೂ ಸಹ ಶೋಷಿತ ವರ್ಗದ ಸಮುದಾಯಗಳು ಸಮಾಜದಲ್ಲಿ ಅಭಿವೃದ್ಧಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದರು.
ಹಾಗೂ ಯಾವುದೇ ಅಧಿಕಾರ ಸಿಗುತ್ತಿರಲಿಲ್ಲ, ಸಮಾಜದಲ್ಲಿ ಸರಿ ಸಮಾನರಾಗಿ ಬದುಕಲು ಆಗುತ್ತಿರಲಿಲ್ಲ, ಇಂತಹ ಮಹಾನ್ ವ್ಯಕ್ತಿಯನ್ನು ಕಳೆದುಕೊಂಡು ಇಂದಿಗೆ 68 ವರ್ಷಗಳು ಆಗಿವೆ. ಇಂತಹ ಮಹಾನ್ ಚೇತನ ಮತ್ತೆ ಹುಟ್ಟಿ ಬರಲಿ.ಅಂಬೇಡ್ಕರ್ ಅವರು ಸಂಘರ್ಷದ ಹಾದಿ ತುಳಿಯದೆ ಸಾಮರಸ್ಯದ ಮೂಲಕ ಸಮಾಜವು ಒಗ್ಗೂಡುವಂತೆ ಮಾಡಿದ್ದಾರೆ. ಅವರ ವ್ಯಕ್ತಿತ್ವ, ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದರು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಮೂರ್ತಿ ಮಾತನಾಡಿ,ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕು ಮತ್ತು ಜವಾಬ್ದಾರಿ ನೀಡಲಾಗಿದೆ. ನಾಗರಿಕರ ಹಕ್ಕುಗಳನ್ನು ಪ್ರತಿಪಾದಿಸುವುದರ ಜತೆಗೆ ಗುರುತರ ಜವಾಬ್ದಾರಿ ನಿರ್ವಹಿಸಬೇಕಿದೆ.ಸಮಾನತೆ ದೃಷ್ಟಿಯಲ್ಲಿ ಸಂವಿಧಾನ ರಚಿಸಿದ ಮಹಾನ್ ಚೇತನ ರವರು, ನಾವೆಲ್ಲರೂ ಜೀವನದಲ್ಲಿ ಅವರ ಚಿಂತನೆ ಅಳವಡಿಸಿಕೊಳ್ಳಬೇಕಿದೆ’ ಎಂದರು.
ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷ ಗೋವಿಂದ, ಉಪಾಧ್ಯಕ್ಷರಾದ ಚಂದ್ರವೇಣಿ ಮಂಜುನಾಥ್,ಸದಸ್ಯರಾದ ವೆಂಕಟೇಶ್, ರತ್ನಮ್ಮ, ಪೊನ್ನಿ, ಶಫಿ,ತಹಶೀಲ್ದಾರ ವೆಂಕಟೇಶ್,ಈ.ಓ ರವಿಕುಮಾರ್, ಪುರಸಭೆ ಮುಖ್ಯ ಅಧಿಕಾರಿ ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯ ಅಂಜಲಿದೇವಿ, ಶಿಕ್ಷಕರ ಸಂಘದ ಅಪ್ಪಯ್ಯ ಗೌಡ, ಆಂಜನೇಯ ಗೌಡ, ಶಿಕ್ಷಕರಾದ ನಾರಾಯಣಸ್ವಾಮಿ, ನಾಗರಾಜ್, ಸುಜಾತ,ಸಂಜೀವಪ್ಪ ಇದ್ದರು.
ವರದಿ: ವಿಷ್ಣು ಕೋಲಾರ