ಕೋಲಾರನ್ಯೂಸ್

ನಿರಾತಂಕವಾಗಿ ಟಿಇಟಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ.

ನಿರಾತಂಕವಾಗಿ ಟಿಇಟಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ.

(KOLARA): ಕೋಲಾರ : ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ ಜೂನ್ 30ರಂದು ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ಸರ್ಕಾರಿ ಪ್ರಾಥಮಿಕ ಶಿಕ್ಷಕರ ಅರ್ಹತಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ನಿರಾತಂಕವಾಗಿ ನಡೆಯುವಂತಾಗಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು  ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಹೇಳಿದರು.
ಇಂದು ಜಿಲ್ಲಾಡಳಿತದ ನ್ಯಾಯಾಂಗ ಸಭಾಂಗಣದಲ್ಲಿ ಈ ಕುರಿತು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂದು ಬೆಳಿಗ್ಗೆ 9.30ರಿಂದ 12ರವರೆಗೆ ನಡೆಯುವ ಮೊದಲ ಅಧಿವೇಶನದಲ್ಲಿ 9 ಕೇಂದ್ರಗಳಲ್ಲಿ 2142 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 2ರಿಂದ 4.30ರವರೆಗೆ ನಡೆಯುವ ದ್ವಿತೀಯ ಅಧಿವೇಶನದಲ್ಲಿ 14ಕೇಂದ್ರಗಳಲ್ಲಿ 3394 ಅಭ್ಯರ್ಥಿಗಳು ಸೇರಿದಂತೆ ಒಟ್ಟು 5536 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳು ಜನಸಂದಣಿಯಿಂದ ಕೂಡಿರದಂತೆ ನೋಡಿಕೊಳ್ಳಲು ಅಗತ್ಯ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗುವುದು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ  ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು  ಕಾಲಕಾಲಕ್ಕೆ ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿದೆ ಎಂದರು.


ಪರೀಕ್ಷೆಗಳು ನಿರಾಂತಕವಾಗಿ, ಪಾರದರ್ಶಕವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗೌಪ್ಯ ಸಾಮಗ್ರಿಗಳನ್ನು ಖಜಾನೆಯಲ್ಲಿ ಸಂರಕ್ಷಿಸಿಡಲು ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಖಜಾನೆಯಿಂದ ಗೌಪ್ಯ ಸಾಮಗ್ರಿಗಳು ತಲುಪಿಸಲು 9 ಮಾರ್ಗಗಳನ್ನು ಹಾಗೂ 9 ಮಾರ್ಗಧಿಕಾರಿಗಳನ್ನು ನೇಮಕ ಮಾಡಲಾಗಿದೆ. 14 ಮುಖ್ಯ ಅಧಿಕ್ಷಕರು ಹಾಗೂ 14 ಸ್ಥಾನಿಕ ಜಾಗೃತ ದಳ ಸದಸ್ಯರನ್ನು ನೇಮಕ ಮಾಡಲಾಗಿದೆ. ಇದಲ್ಲದೆ ಪರೀಕ್ಷಾ ಕಾರ್ಯಕ್ಕೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ದಿನದಂದು ನಿರಂತರ ವಿದ್ಯುತ್ ಪೂರೈಕೆಗೆ ಬೆಸ್ಕಾಂಗೆ ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರದ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪರೀಕ್ಷಾ ರ್ಥಿಗಳಲ್ಲದೆ ಇತರರಿಗೆ ಪ್ರವೇಶ ನಿಷೇಧಿಸಿ ನಿಷೇಧಾಜ್ಞೆ ಹೊರಡಿಸಲಾಗುತ್ತದೆ. ಅಲ್ಲದೇ ಈ ಪ್ರದೇಶದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದವರು ತಿಳಿಸಿದರು.ಒಟ್ಟಾರೆ ಸರ್ಕಾರಿ ಪ್ರಾಥಮಿಕ ಶಿಕ್ಷಕರ ಅರ್ಹತಾ ಪರೀಕ್ಷೆಗಳನ್ನು ಕ್ರಮಬದ್ಧವಾಗಿ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನೆರೆದಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾ ಖಜಾನಾಧಿಕಾರಿ ಮಹೇಂದ್ರ  ಸೇರಿದಂತೆ ಪರೀಕ್ಷಾ ಕೇಂದ್ರಗಳ ನೋಡಲ್‌ ಅಧಿಕಾರಿಗಳು, ನಿಯೋಜಿತ ಅಧಿಕಾರಿ-ಸಿಬ್ಬಂದಿ, ಮಾರ್ಗಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code