ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ.
(KOLARA): ಬಂಗಾರಪೇಟೆ: ಕಾರಮಂಗಳ ಗುಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಿ.ಎಂ. ಮುನಿಶಾಮಪ್ಪ ಹಾಗೂ ಉಪಾಧ್ಯಕ್ಷರಾಗಿ ಜಿ.ಎಂ. ನಾರಾಯಣಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕಾಗಿ ಸೋಮವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಒಟ್ಟು 09 ನಿರ್ದೇಶಕರ ಬಲ ಹೊಂದಿರುವ ಸಂಘದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಿ.ಎಂ ಮುನಿಶಾಮಪ್ಪ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಎಂ ನಾರಾಯಣಸ್ವಾಮಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಬಾಲಕೃಷ್ಣ ಘೋಷಣೆ ಮಾಡಿದ್ದಾರೆ.
ಈ ವೇಳೆ ನೂತನ ಅಧ್ಯಕ್ಷ ಜಿ.ಎಂ ಮುನಿಶಾಮಪ್ಪ ಮಾತನಾಡಿ, ಸಂಘದ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಶ್ರಮಿಸುತ್ತೇನೆ. ಸಂಘದಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಜಿ.ಎಂ ಮುರಳಿ , ಗೋವಿಂದಪ್ಪ, ಮಂಜುನಾಥ್, ಜಯಪ್ಪ, ಸರೋಜಮ್ಮ, ಪ್ರಭಾವತಿ, ನಾರಾಯಣಸ್ವಾಮಿ, ನಾಮನಿ ನಿರ್ದೇಶಕ ನಟರಾಜ್ ಹಾಗೂ ಕಾರ್ಯದರ್ಶಿ ನಾಗರಾಜ್ ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ