ನ್ಯೂಸ್ಶಿವಮೊಗ್ಗ

27 ರಂದು ಉಚಿತ ಕಣ್ಣಿನ ಪೊರೆ ತಪಾಸಣೆ ಶಸ್ತ್ರ ಚಿಕಿತ್ಸಾ ಶಿಬಿರ.

27 ರಂದು ಉಚಿತ ಕಣ್ಣಿನ ಪೊರೆ ತಪಾಸಣೆ ಶಸ್ತ್ರ ಚಿಕಿತ್ಸಾ ಶಿಬಿರ.

(SHIVAMOGA): ಸೊರಬ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಿ.27 ರ ಬುಧವಾರ ಬೆಳಿಗ್ಗೆ 10 ಗಂಟೆಯಿoದ 1 ಗಂಟೆ ವರೆಗೆ ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಲಯನ್ಸ್ ಕ್ಲಬ್ ಸೊರಬ, ಭಾರತೀಯ ವೈದ್ಯಕೀಯ ಸಂಘ, ತಾಲ್ಲೂಕು ವೈದ್ಯಾಧಿಕಾರಿಗಳ ಕಛೇರಿ, ಸಾರ್ವಜನಿಕ ಆಸ್ಪತ್ರೆ ಸೊರಬ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ ಶಿವಮೊಗ್ಗ ಮತ್ತು ರೋ ಸುಬ್ರಾವ್ ಕಾಸರಕೋಡ ಮೆಮೋರಿಯಲ್ ರೋಟರಿ ಚಾರಿಟೇಬಲ್ ಆಸ್ಪತ್ರೆ ಶಿರಸಿ ಇವರುಗಳ ಆಶ್ರಯದಲ್ಲಿ ನಡೆಸಲಾಗುತ್ತಿದ್ದು, ಕಣ್ಣಿನ ಪೊರೆ ತೊಂದರೆಯುಳ್ಳವರು ಈ ಶಿಬಿರದ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದು ಲಯನ್ ಜಿಲ್ಲಾ ಮಾಜಿ ಗರ್ವನರ್ ಡಾ. ಎಂ.ಕೆ ಭಟ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಕಣ್ಣಿನ ಶಸ್ತ್ರ ಚಿಕಿತ್ಸೆಯನ್ನು ರೋಟರಿ ಚಾರಿಟೇಬಲ್ ಆಸ್ಪತ್ರೆ ಶಿರಸಿಯಲ್ಲಿ ನಡೆಸಲಾಗುತ್ತಿದ್ದು ಶಸ್ತ್ರ ಚಿಕಿತ್ಸೆಗೆ ಒಳಪಟ್ಟವರಿಗೆ ತಜ್ಞ ವೈದ್ಯರ ಸಲಹೆಯಂತೆ ಉಚಿತ ಲೆನ್ಸ್, ಊಟ, ವಸತಿ, ಸಾರಿಗೆ ವ್ಯವಸ್ಥೆಯನ್ನು ನೀಡಲಾಗುತ್ತದೆ.
ಹೆಚ್ಚಿನ ವಿವರಗಳಿಗೆ ಮೊಬೈಲ್ 9686498767, 9901841885,990155781, 9448582695 ಕ್ಕೆ ಸಂಪರ್ಕಿಸಲು ಕೊರಿದ್ದಾರೆ.

ಸಂದೀಪ ಯು.ಎಲ್, ವೆಸ್ಟರ್ನ್ ಘಾಟ್ ನ್ಯೂಸ್ ಸೊರಬ

Leave a Reply

Your email address will not be published. Required fields are marked *

Scan the code