ಜಿಲ್ಲೆನ್ಯೂಸ್

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ಕಾರ್ಯಕರ್ತರಲ್ಲಿ ನವೋತ್ಸಾಹ ಮೂಡಿದೆ.

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ಕಾರ್ಯಕರ್ತರಲ್ಲಿ ನವೋತ್ಸಾಹ ಮೂಡಿದೆ.

(KOLARA): ಬಂಗಾರಪೇಟೆ :ಅಧ್ಯಕ್ಷ ಸ್ಥಾನದ ಸಂತಸಕ್ಕಾಗಿ ಅನ್ನಸಂತರ್ಪಣೆ: ಗೋಪಾಲರೆಡ್ಡಿ ಎಸ್.ಎನ್.ನಾರಾಯಣಸ್ವಾಮಿ ಅವರು ಮೂರು ಭಾರಿ ಶಾಸಕರಾಗಿ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ತಿದ್ದಾರೆ. ಕ್ಷೇತ್ರದ ಜನತೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು, ಆದರೆ ಸಚಿವ ದರ್ಜೆಯ ಸ್ಥಾನಮಾನ ಹೊಂದಿರುವ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ಕಾರ್ಯಕರ್ತರಲ್ಲಿ ನವೋತ್ಸಾಹ ಮೂಡಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಜಿಲ್ಲಾ ಪಂಚಾಯಿತಿ ಪ್ರಬಲ ಆಕಾಂಕ್ಷಿ ಗೋಪಾಲರೆಡ್ಡಿ ತಿಳಿಸಿದರು.

ಪಟ್ಟಣದ ಬಸ್ ನಿಲ್ದಾಣದ ಸಮೀಪ ಆಯೋಜಿಸಿದ್ದ ಅನ್ನದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಸ್.ಎನ್.ನಾರಾಯಣಸ್ವಾಮಿ, ಕೇವಲ ಶಾಸಕರಲ್ಲ ಬದಲಿಗೆ ಬಂಗಾರಪೇಟೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಕಾಯಕಯೋಗಿಯಾಗಿ ಸೇವಕನ ರೂಪದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಚಿವ ಸ್ಥಾನ ಸಿಗುತ್ತದೆ ಎಂಬ ಭರವಸೆಯಲ್ಲಿ ತಾಲ್ಲೂಕಿನಾದ್ಯಂತ ೫೦ಕಡೆಗಳಲ್ಲಿ ಅನ್ನದಾನ ಮಾಡುವ ಅಭಿಲಾಷೆ ಇತ್ತು. ಆದರೆ ಸಿದ್ದರಾಮಯ್ಯನವರು ಉನ್ನತ ಸ್ಥಾನವಾದ ನಿಗಮದ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಿರುವುದು ಸಂತಸ ತಂದಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಶಾಸಕರ ಅನುದಾನದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ: ಡಿ.ಕೆ.ಹಳ್ಳಿ ಗ್ರಾಮ ಪಂಚಾಯಿತಿಯ ಆಡಳಿತ ಇತಿಹಾಸವನ್ನು ನೋಡಿದರೆ, ಶಾಸಕರ ಅನುದಾನದ ಬಹು ದೊಡ್ಡ ಪ್ರಮಾಣ ನಮ್ಮ ಪಂಚಾಯಿತಿಗೆ ಲಭಿಸಿದೆ. ಬ್ಯಾಟರಾಯನ ದೇವಸ್ಥಾನದ ರಸ್ತೆಗೆ ೧.೨೦ಲಕ್ಷ ರೂ, ದಾಸರಹೊಸಹಳ್ಳಿಗೆ ೧ಕೋಟಿ, ಆಲದಮರ ನಗರಕ್ಕೆ ೨ಕೋಟಿ, ಒಟ್ಟು ೫ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಬಹುತೇಕ ಯೋಜನೆಗಳು ಪೂರ್ಣಗೊಂಡು ಉದ್ಘಾಟನೆಯನ್ನು ಕಂಡಿವೆ. ಮುಂದಿನ ದಿನಗಳಲ್ಲಿ ಶಾಸಕರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವೆಕ್ತಪಡಿಸಿದರು.

ನಾನು ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದು, ಬಹುತೇಕ ಅಭಿವೃದ್ದಿ ಕಾರ್ಯಗಳನ್ನು ಶಾಸಕರ ನೇತೃತ್ವದಲ್ಲಿ ಮಾಡಿದ್ದೇನೆ. ಆದಕಾರಣ ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪ್ರಬಲ ಕಾಂಗ್ರೆಸ್ ಆಕಾಂಕ್ಷಿತ ಅಭ್ಯರ್ಥಿಯಾಗಿದ್ದೇನೆ. ಶಾಸಕರು ಮತ್ತು ಹೈಕಮಾಂಡ್ ಅವಕಾಶ ಕೊಟ್ಟಲ್ಲಿ ಈ ಭಾರಿ ಜಯಗಳಿಸುವ ಸಂಪೂರ್ಣ ವಿಶ್ವಾಸಿವಿದೆ. ಕೊರೊನಾ ಸಮಯದಲ್ಲಿ ಸಾವಿರಾರು ಆಹಾರ ಕಿಟ್‌ಗಳನ್ನು ವಿತರಿಸಲಾಗಿದೆ. ಮತ್ತು ಬಹಳಷ್ಟು ಬಡವರಿಗೆ ಸಹಾಯಹಸ್ತ ನೀಡಿದ್ದೇನೆ. ಇದರೊಟ್ಟಿಗೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕಳುಹಿಸಿಕೊಟ್ಟಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಶ್ರೀನಿವಾಸ್, ವಿಜಿಕುಮಾರ್, ಅನಿಲ್, ಅರುಣ್, ಮುತ್ತು, ಸಿ.ಎಂ.ಹರೀಶ್, ಸೊಂಟಿಗಾನಹಳ್ಳಿ ಹರೀಶ್, ಆಟೋ ಚಾಲಕರು ಹಾಗು ಇತರರು ಇದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code