ಹುಲಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ
(KOLARA): ಬಂಗಾರಪೇಟೆ :ನಾವು ಗಳಿಸಿದ ಆಸ್ತಿ,ಅಂತಸ್ತು,ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯೊಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ ಎಂದು ಶಾಲೆಯ ಮುಖ್ಯೋಪಾಧ್ಯರಾದ ಸಂಜೀವಪ್ಪ ಅಭಿಪ್ರಾಯಪಟ್ಟರು.
ತಾಲೂಕಿನ ಹುಲಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2006-07ನೇ ಸಾಲಿನ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ ಎಂದರು.
ಶಿಸ್ತು ವಿದ್ಯಾರ್ಥಿಗಳ ಬದುಕಿನ ಸೌಂದರ್ಯವನ್ನು ಹೆಚ್ಚಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿ ಸಂಘ ಕಟ್ಟಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ತಿಳಿಸಿದರು.
ಈ ವೇಳೆ ನಿವೃತ್ತ ಶಿಕ್ಷಕರಾದ ರಾಮಚಂದ್ರಪ್ಪ ಮಾತನಾಡಿ, ವಿಜ್ಞಾನ ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ.ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ.ಇಂತಹ ಪರಿಸ್ಥಿತಿಯಲ್ಲಿ ಹಳೆಯ ವಿದ್ಯಾರ್ಥಿಗಳು ಎಲ್ಲರನ್ನೂ ಒಟ್ಟುಗೂಡಿಸುವ,ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮ ಇದು ಎಂದು ತಿಳಿಸಿದರು.
ಪೋಷಕರು ಹಾಗೂ ಗುರುಗಳು ಮಗುವಿನ ಭವಿಷ್ಯ ರೂಪಿಸುವ ರಾಯಭಾರಿಗಳು. ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದರೆ ಅವರಿಗೆ ಆಗುವ ಸಂತೋಷಕ್ಕೆ ಪಾರವೇ ಇಲ್ಲ.ಗುರುವಂದನಾ ಕಾರ್ಯಕ್ರಮಗಳು ಗುರು ಶಿಷ್ಯರ ಸಂಬಂಧ ಗಟ್ಟಿಯಾಗಿಸುತ್ತದೆ ಎಂದರು.
ಈ ವೇಳೆ ಹಳೆಯ ವಿದ್ಯಾರ್ಥಿಗಳಿಂದ ಹುಲಿಬೆಲೆ ಶಾಲೆಯಲ್ಲಿ ಕಾರ್ಯನಿರ್ವಹಿಸದಿಂದಂತಹ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮವನ್ನು ನೆರವೇರಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಹುಲಿಬೆಲೆ ಶಾಲೆಯಲ್ಲಿ ಕಾರ್ಯನಿರ್ವಹಿಸಿದ ಶಿಕ್ಷಕರಾದ ಅನ್ನಪೂರ್ಣ, ನಾಗರತ್ನ,ಶಕುಂತಲಾ, ರಮೇಶ್,ರುಕ್ಮಿಣಿ,ಪ್ರಮೀಳಾ,ವೆಂಕಟಪ್ಪ,ಚೇತನ್ ಹಾಗೂ ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ: ವಿಷ್ಣು ಕೋಲಾರ