News & Updatesಚಿಕ್ಕಮಗಳೂರುನ್ಯೂಸ್ಮಲೆನಾಡು

ಹೆಜ್ಜೇನು ದಾಳಿಗೆ 10ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು

ಹೆಜ್ಜೇನು ದಾಳಿಗೆ 10ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು

(CHIKKAMAGALURU ): ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ್ದು, ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ವಿನೋದ, ಪುಷ್ಪ, ಪ್ರೇಮ ಎಂಬುವವರು ಗಾಯ ಗೊಂಡಿದ್ದಾರೆ. ಗಾಯ ಗೊಂಡ ಕಾರ್ಮಿಕರನ್ನು ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆಯ M.G.M. ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು/Advertisement



ಕಾಫಿ ತೋಟಗಳಲ್ಲಿ ಜೇನುಗಳು ಗೂಡು ಕಟ್ಟಿದ್ದು, ರಸ್ತೆಯಲ್ಲಿ ಓಡಾಡುವವರ ಮೇಲೆ ಹಾಗೂ ತೋಟದಲ್ಲಿ ಕೆಲಸ ಮಾಡುವವರ ಮೇಲೆ ದಾಳಿ ಮಾಡುತ್ತಿವೆ. ಇದರಿಂದಾಗಿ ಯುವಕರು, ಯುವತಿಯರು ಸೇರಿದಂತೆ ಗ್ರಾಮದ ಹಲವರು ಜೇನು ದಾಳಿಗೆ ಸಿಲುಕಿ ಆಸ್ಪತ್ರೆ ಸೇರಿದ ಉದಾಹರಣೆ ಸಾಕಷ್ಟು ನಡೆದಿವೆ. ಜೇನು ಹುಳುಗಳ ಧಿಡೀರ್ ದಾಳಿಗೆ ಆತಂಕಗೊಂಡಿರುವ ಗ್ರಾಮಸ್ಥರು ದಾಳಿ ನಡೆದ ರಸ್ತೆಯಲ್ಲಿ ಓಡಾಡುವುದಕ್ಕೆ ಭಯ ಪಡುವಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

Leave a Reply

Your email address will not be published. Required fields are marked *

Scan the code