ಡಿಕೆ ಹಳ್ಳಿ ವೃತ್ತದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ ಕರ್ನಾಟಕ ರಕ್ಷಣಾ ವೇದಿಕೆ
(KOLARA): ಬಂಗಾರಪೇಟೆ :ಸುಮಾರು ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮ ಮಂದಿರದ ಕನಸು ನನಸಾಗಿದೆ ರಾಮಜನ್ಮ ಭೂಮಿಯ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಇಂದು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ. ಮುನಿರಾಜು ಹೇಳಿದರು.
ತಾಲೂಕಿನ ಡಿಕೆ ಹಳ್ಳಿ ಸರ್ಕಲ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಇಂದು ಅಯೋಧ್ಯೆಯಲ್ಲಿ ರಾಮನಿಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನೆಲೆ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ಭಕ್ತಾದಿಗಳಿಗೆ ಪಾನಕ ಹಾಗೂ ಪ್ರಸಾದ ವಿನಿಯೋಗವನ್ನು ನೆರವೇರಿಸಿದರು.
ಡಿಕೆ ಹಳ್ಳಿ ಕಾಂಗ್ರೆಸ್ನ ಪ್ರಭಾವಿ ಮುಖಂಡರಾದ ಗೋಪಾಲ ರೆಡ್ಡಿ ಮಾತನಾಡಿ, ನಮ್ಮ ದೇಶದ ಕನಸು ಸುಮಾರು ವರ್ಷಗಳ ನಂತರ ನನಸಾಗಿದೆ, ಅಯ್ಯೋದ್ಯೆಯಲ್ಲಿ ಇಂದು ಶ್ರೀರಾಮ ಮಂದಿರದಲ್ಲಿ ರಾಮನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುತ್ತಿರುವುದು ಬಹಳ ಸಂತೋಷದ ವಿಷಯವಾಗಿದೆ. ಶ್ರೀರಾಮನು ಸಮಸ್ತ ನಾಡಿನ ಜನತೆಗೆ ಉತ್ತಮ ಮಳೆ ಬೆಳೆ ಸುಖ ಶಾಂತಿ ನೆಮ್ಮದಿ ಕರುಣಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಡಿಕೆ ಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸುರೇಶ್ ಮಾತನಾಡಿ, ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಇಂದು ದೇಶದಾದ್ಯಂತ ಬಹಳ ವಿಜೃಂಭಣೆಯಿಂದ ಹಬ್ಬದ ರೀತಿ ಆಚರಣೆ ಮಾಡಲಾಗುತ್ತಿದೆ. ಸುಮಾರು ವರ್ಷಗಳ ನಂತರ ಅಯ್ಯೋದ್ಯೆಯಲ್ಲಿ ರಾಮನ ಮಂದಿರ ಪ್ರತಿಷ್ಠಾಪನೆಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಮಯ್ಯ,ಮುಖಂಡರಾದ ಕರುಣಾಮೂರ್ತಿ, ಅಮರನಾಥ್, ಮಂಜುನಾಥ್,ನಾಗರಾಜ್, ಕಮಲ್ ದಾಸ್, ಮುರಳಿ ರಾಜಶೇಖರ್ ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ