ನ್ಯೂಸ್ಶಿವಮೊಗ್ಗ

ಗಿಣಿವಾರದ ಕೊಡಚಾದ್ರಿ ವಸತಿ ಶಾಲೆಯಲ್ಲಿ ಶಾಲೆಯಂಗಳದಲ್ಲಿ ಸಾಹಿತ್ಯ ಕಾರ್ಯಕ್ರಮ

ಗಿಣಿವಾರದ ಕೊಡಚಾದ್ರಿ ವಸತಿ ಶಾಲೆಯಲ್ಲಿ ಶಾಲೆಯಂಗಳದಲ್ಲಿ ಸಾಹಿತ್ಯ ಕಾರ್ಯಕ್ರಮ

(SHIVAMOGA): ಸಾಗರ: ಶಾಲಾ ಹಂತದಲ್ಲಿಯೇ ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಮಾನ್ವಿ ಕರೂರು ಹೇಳಿದರು.
ಅವರು ಇಲ್ಲಿಗೆ ಸಮೀಪದ ಗಿಣಿವಾರ ಕೊಡಚಾದ್ರಿ ವಸತಿ ಶಾಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ಧ ಶಾಲೆಯಂಗಳದಲ್ಲಿ ಸಾಹಿತ್ಯ ಕಾರ್ಯಕ್ರವನ್ನು ಬುಟ್ಟಿಗೆ ಭತ್ತ ಸುರಿಯುವ ಮೂಲಕ ಉದ್ಘಾಟಿಸಿ ಮಾತನಾಡಿ ಮೃದುವಾದ ಮಕ್ಕಳ ಮನಸ್ಸಿಗೆ ಹಿತವಾದ ವಿಷಯಗಳನ್ನು ತುಂಬುವ ಕೆಲಸ ಆಗಬೇಕಾಗಿದೆ, ಶಿಕ್ಷಣದ ಜೊತೆಗೆ ಸಾಹಿತ್ಯದ ಅಭಿರುಚಿಯನ್ನು ಬೆಳೆಸಬೇಕಾಗಿದೆ, ಮಕ್ಕಳ ಕಲಿಕೆಗೆ ಉತ್ತಮವಾದ ಪರಿಸರವನ್ನುಂಟುಮಾಡಬೇಕು.

ಶಿವಮೊಗ್ಗ ಜಿಲ್ಲೆ ಸಾಹಿತ್ಯಕವಾಗಿ ವಿಶೇಷತೆಯನ್ನು ಪಡೆದಿದೆ. ಅನೇಕ ದಿಗ್ಗಜ ಸಾಹಿತಿಗಳು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ ಹಾಗಾಗಿ ಜಿಲ್ಲೆ ಸಾಹಿತ್ಯ ಹಾಗೂ ಸಾಂಸ್ಕೃತಿಕಾಗಿ ಅತ್ಯಂತ ಶ್ರೀಮಂತವಾಗಿದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಗುರುತಿಸಿಕೊಳ್ಳು ಕೆಲಸವಾಗಲಿ ಎಂದರು.
ಕಸಾಪ ತಾಲ್ಲೂಕು ಅಧ್ಯಕ್ಷ ವಿ.ಟಿ.ಸ್ವಾಮಿ ಆಶಯ ಮಾತುಗಳನ್ನಾಡಿ ಶಿಕ್ಷಣದಲ್ಲಿ ಸಾಹಿತ್ಯದ ಸಂವೇಧನ ಇರಬೇಗಿದೆ, ಮೌಲ್ಯ ಶಿಕ್ಷಣಕ್ಕೆ ಆಧ್ಯತೆ ನೀಡಬೇಕಾಗಿದೆ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆ ಇರಬೇಕಾಗಿದೆ. ಕನ್ನಡದ ಶ್ರೀಮಂತ ಪರಂಪರೆಯನ್ನು ಮಕ್ಕಳಿಗೆ ತಿಳಿಸುವ ಮೂಲಕ ಮಕ್ಕಳಲ್ಲೂ ಸಾಹಿತ್ಯದ ಅಭಿರುಚಿಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ತಾಲ್ಲೂಕಿನಲ್ಲಿ ಶಾಲೆಯಂಗಳದಲ್ಲಿ ಸಾಹಿತ್ಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಕಥೆ, ಕವನ, ಪ್ರಬಂಧ, ಭಾಷಣ, ಕಲೆಗಳಲ್ಲಿ ಬೆಳಸಲಾಗುತ್ತದೆ ಈ ನಿಟ್ಟಿನಲ್ಲಿ ಶಾಲೆಗಳು ಹಾಗೂ ಪೋಷಕರು ಇಂತಹ ಕಾರ್ಯಕ್ರಮಗಳಿಗೆ ವಿಶೇಷವಾದ ಸಹಕಾರವನ್ನು ನೀಡುವಂತಾಗಲಿ ಎಂದರು.


ಈ ಸಂದರ್ಭದಲ್ಲಿ ಕೊಡಚಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಕೆ.ಆರ್.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಜಾನಪದ ಕಲಾವಿದ ರಾಜೇಂದ್ರ ಆವಿನಹಳ್ಳಿ, ಕಸಾಪ ಗೌರವ ಕಾರ್ಯದರ್ಶಿ ನಾರಾಯಣಮೂರ್ತಿ ಕಾನಗೋಡು, ಕಥೆಗಾರ ಪರಮೇಶ್ವರ ಕರೂರು, ಶಾಲೆಯ ಮುಖ್ಯ ಶಿಕ್ಷಕಿ ನಂದಕುಮಾರಿ ಮೊದಲಾದವರು ಉಪಸ್ಥಿತರಿದ್ದರು.
ಆರಂಭದಲ್ಲಿ ಪ್ರತೀಕ್ಷಾ  ಪ್ರಾರ್ಥಿಸಿ ಅರ್ಪಿತಾ ಸಿ.ಸ್ವಾಗತಿಸಿ ರಚನಾ ವಂದಿಸಿ ಪ್ರಸನ್ನ ಕೆ.ಪಿ ನಿರೂಪಿಸಿದರು. ನಂತರ ಮಕ್ಕಳಿಗೆ ಕಥೆ, ಕವನ, ಪ್ರಬಂಧ ಹಾಗೂ ಭಾಷಣದ ಕುರಿತಾಗಿ ಮಾಹಿತಿಯನ್ನು ನೀಡಲಾಯಿತು ಇದೇ ಸಂದರ್ಭದಲ್ಲಿ ಮಕ್ಕಳು ಕಥೆ, ಕವನಗಳನ್ನು ರಚಿಸಿ ವಾಚಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳಿಗೆ ಗಿಡಗಳನ್ನು ನೀಡುವ ಮೂಲಕ ಅಭಿನಂದಿಸಲಾಯಿತು.

ವರದಿ‌: ರಾಘವೇಂದ್ರ ತಾಳಗುಪ್ಪ

Leave a Reply

Your email address will not be published. Required fields are marked *

Scan the code