ಜಿಲ್ಲೆನ್ಯೂಸ್

ತೊಪ್ಪನಹಳ್ಳಿ ಗ್ರಾಮದಲ್ಲಿ ನೂತನ ಗ್ರಾ.ಪಂ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಎಸ್ಎನ್ ನಾರಾಯಣಸ್ವಾಮಿ

ತೊಪ್ಪನಹಳ್ಳಿ ಗ್ರಾಮದಲ್ಲಿ ನೂತನ ಗ್ರಾ.ಪಂ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಎಸ್ಎನ್ ನಾರಾಯಣಸ್ವಾಮಿ

(KOLARA): ಬಂಗಾರಪೇಟೆ: ಬಹಳ ವರ್ಷಗಳ ನಂತರ ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಕಾಮಗಾರಿಗೆ ಸುಮಾರು 30 ಲಕ್ಷ ರೂಪಾಯಿ ವೆಚ್ಚದಲ್ಲಿ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ ಮಂಡಳಿಯ ಅಧ್ಯಕ್ಷರಾದ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ತೊಪ್ಪನಹಳ್ಳಿ ಗ್ರಾಮದಲ್ಲಿ ಇಂದು ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಾ, ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿಯನ್ನು ಇನ್ನು ಹೆಚ್ಚಿನ ಅಭಿವೃದ್ಧಿ ಮಾಡಬೇಕೆಂದು ಆಸೆ ಇತ್ತು ಅದರಂತೆ ಇಂದು ನೂತನ ಕಟ್ಟಡಕ್ಕೆ ನನ್ನ ಅನುದಾನದಿಂದಲೂ ಸಹ 10 ಲಕ್ಷ ರೂಪಾಯಿಯನ್ನು ನೀಡುತ್ತೇನೆ ಎಂದು ಹೇಳಿದರು.

ಈ ಕಟ್ಟಡವನ್ನು ಬಹಳ ಸುಂದರವಾಗಿ ನಿರ್ಮಾಣ ಮಾಡಬೇಕೆಂದು ಇಂಜಿನಿಯರಿಗೆ ಸಲಹೆ ನೀಡಿದರು. ತೊಪ್ಪನಹಳ್ಳಿ ದೇವಾಲಯದ ಕಲ್ಯಾಣ ಮಂಟಪಕ್ಕೆ ಬಿಡುಗಡೆ ಮಾಡಿದ್ದ ಹಣವನ್ನು ಬಿಜೆಪಿ ಸರ್ಕಾರ ವಾಪಸ್ ತೆಗೆದುಕೊಂಡಿತ್ತು, ಈಗ ನಮ್ಮ ಕಾಂಗ್ರೆಸ್ ಸರ್ಕಾರ ಬಂದ ಮೇಲೆ 45 ಲಕ್ಷ ಹಣವನ್ನು ಬಿಡುಗಡೆ ಮಾಡಲಾಗಿದೆ ಶೀಘ್ರದಲ್ಲೇ ಕಾಮಗಾರಿ ಪ್ರಾರಂಭ ಮಾಡಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರಭಾಕರ್ ರೆಡ್ಡಿ, ಉಪಾಧ್ಯಕ್ಷರಾದ ಲಾವಣ್ಯ ಹಂಸಾನಂದ, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರಾದ ನಾಗವೇಣಿ ಲಕ್ಷ್ಮೀ ನಾರಾಯಣ ಪ್ರಸಾದ್, ಮುಖಂಡರಾದ ಚಿಕ್ಕ ವಲಗಮಾದಿ ಮುನಿರಾಜು, ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಗೋವಿಂದರಾಜು,ಕಾಮಸಮುದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಆದಿನಾರಾಯಣಕುಟ್ಟಿ, ಹಾಗೂ ಚಂದ್ರಕಲಾ ರಂಗಾಚಾರಿ, ಜಯಣ್ಣ, ರಾಮಶೆಟ್ಟಿ, ವರದರಾಜು, ಸೀತಾರಾಮ್, ಶ್ರೀನಿವಾಸ್, ಪಿಡಿಒ ಮಧುಚಂದ್ರ ಮೊದಲಾದವರು ಇದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code