ಮಕ್ಕಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕರು.
(CHIKKAMAGALURU): ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಅಕ್ಷರ ದಾಸೋಹ ಮಧ್ಯಾಹ್ನದ ಉಪಹಾರ ಯೋಜನೆಯಡಿ ವಾರದ ಆರು ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶೃಂಗೇರಿ ಕ್ಷೇತ್ರ ವಿಧಾನಸಭಾ ಶಾಸಕರು ಟಿ ಡಿ ರಾಜೇಗೌಡರು.
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಬಾಳೆಹೊನ್ನೂರು ಪಟ್ಟಣದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಮೊಟ್ಟೆ ವಿತರಣೆ ಕಾರ್ಯಕ್ರಮದಲ್ಲಿ ಶಾಸಕರು ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶಗಳನ್ನೊಳಗೊಂಡ ಆಹಾರ ಪದಾರ್ಥಗಳಾಗಿದ್ದು, ಅಜೀಂ ಪ್ರೇಂಜಿ ಫೌಂಡೇಶನ್ ಅವರಿಗೆ ಚಿಕ್ಕಮಗಳೂರು ಜಿಲ್ಲಾ ವಿದ್ಯಾರ್ಥಿಗಳ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಎಲ್ಲಾ ಶಿಕ್ಷಕರು, ಬಿ.ಕಣಬೂರು ಗ್ರಾಪಂ ಅಧ್ಯಕ್ಷ ಸದಾಶಿವ, ಸದಸ್ಯರಾದ ಎಂ.ಎಸ್.ಅರುಣೇಶ್, ಬಿ.ಕೆ.ಮಧುಸೂದನ್, ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು, ಹಾಗೂ ವಿದ್ಯಾರ್ಥಿಗಳು ಮತ್ತಿತರರು ಇದ್ದರು.