ಕೋಲಾರನ್ಯೂಸ್

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ : ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ : ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

(KOLARA): ಕೋಲಾರ : ದೇಶದಲ್ಲಿ ಮೂರನೇ ಭಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ರವರು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಅದರಂತೆ ಬಿಜೆಪಿ ಕಾರ್ಯಕರ್ತರು ದೇಶದಲ್ಲಿ ಮೂರನೇ ಭಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ರವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ತಾಲೂಕಿನ ನರಸಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಇದೇ ಸಂದರ್ಭದಲ್ಲಿ ಕೋಲಾರ ನಗರ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಸದಸ್ಯ ಆರ್ ಮುರುಗೇಶ್, ಮುಖಂಡರಾದ ಟಿ ನಾಗರಾಜ್, ಚಂದ್ರ ಶೇಖರಯ್ಯ, ಮಂಜುನಾಥ್, ಉಮೇಶ್, ಡಿ ಆರ್ ಮಂಜುನಾಥ್, ಶೆಟ್ಟಪ್ಪ,‌ ಸೋಮಣ್ಣ, ಕೃಷ್ಣಪ್ಪ, ಹರೀಶ್, ಮಲ್ಲಿ, ದಿಲೀಪ್, ರೋಹಿತ್, ಮತ್ತಿತರರು ಉಪಸ್ಥಿತರಿದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code