ಕರಾಟೆ ಇನ್ಸಿಟ್ಯೂಟ್ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ: ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಸಮಗ್ರ ಚಾಂಪಿಯನ್ ಪ್ರಶಸ್ತಿ
(SHIVAMOGA): ಸಾಗರ :ಇಲ್ಲಿನ ಸಾಗರ ಕರಾಟೆ ಇನ್ಸಿಟ್ಯೂಟ್‌ನ ವಿದ್ಯಾರ್ಥಿಗಳು ಶಿವಮೊಗ್ಗದಲ್ಲಿ ನಡೆದ 5ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆಯುವ ಮೂಲಕ ಸಾಗರಕ್ಕೆ ಕೀರ್ತಿ ತಂದಿದ್ದಾರೆ.
ಕಟಾ ವಿಭಾಗದಲ್ಲಿ 40 ಚಿನ್ನದ ಪದಕ, 3 ಬೆಳ್ಳಿ ಪದಕ, ಹಾಗೂ ಕುಮತಿ ವಿಭಾಗದಲ್ಲಿ 4 ಚಿನ್ನ, 20 ಬೆಳ್ಳಿ, 1 ಕಂಚಿನ ಪದಕ ಗೆಲ್ಲುವ ಮೂಲಕ ತಂಡವು ಗಮನಾರ್ಹ ಸಾಧನೆ ಮಾಡಿದೆ. ಪಂದ್ಯಾವಳಿಯಲ್ಲಿ ನೇಪಾಳ, ಶ್ರೀಲಂಕಾ ಸೇರಿದಂತೆ ವಿದೇಶ ಹಾಗೂ ದೇಶದ ವಿವಿಧ ರಾಜ್ಯಗಳಿಂದ 2ಸಾವಿರಕ್ಕೂ ಹೆಚ್ಚು ಕರಾಟೆಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅಂತರಾಷ್ಟ್ರೀಯ ಕರಾಟೆ ತರಬೇತುದಾರ ಶಿಯಾನ್ ಪಂಚಪ್ಪ ಮಾರ್ಗದರ್ಶನದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ಮಧು ರಾಮ್ ಸೊರಬ