Newsಚಿಕ್ಕಮಗಳೂರು

ಶಾಲಾ ಕಾಲೇಜುಗಳಲ್ಲಿ ನಡೆಯುವ ರಸಪ್ರಶ್ನೆ ಸ್ಪರ್ಧೆಗಳು ವಿದ್ಯಾರ್ಥಿಗಳ ಜ್ಞಾನವೃದ್ಧಿಗೆ ಪೂರಕ

ಶಾಲಾ ಕಾಲೇಜುಗಳಲ್ಲಿ ನಡೆಯುವ ರಸಪ್ರಶ್ನೆ ಸ್ಪರ್ಧೆಗಳು ವಿದ್ಯಾರ್ಥಿಗಳ ಜ್ಞಾನವೃದ್ಧಿಗೆ ಪೂರಕ


(CHIKKAMAGALURU ): ಶಾಲಾ, ಕಾಲೇಜುಗಳಲ್ಲಿ ನಡೆಯುವ ರಸಪ್ರಶ್ನೆ ಸ್ಪರ್ಧೆಗಳು ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಪೂರಕವಾಗಿರಲಿದೆ ಎಂದು ಬನ್ನೂರು ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಬಿ.ಎಸ್.ಶ್ರೀನಿವಾಸಗೌಡ ತಿಳಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದ ಸಮೀಪದ ಸೀಗೋಡು ಪಿಎಂಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ ಎನ್.ಆರ್.ಪುರ ತಾಲೂಕು ಚುಟುಕು ಸಾಹಿತ್ಯ ಪರಿಷತ್ ವಿಶ್ವ ಮಕ್ಕಳ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಶಿಕ್ಷಣದ ಹಲವು ವಿಷಯಗಳೊಂದಿಗೆ, ಸಾಹಿತ್ಯ, ಕಲೆ, ಒಗಟು, ಗಾದೆ, ವಿಜ್ಞಾನ, ತಂತ್ರಜ್ಞಾನ, ಸಿನಿಮಾ, ಸಂಗೀತ ಸೇರಿದಂತೆ ಹಲವು ಸಾಮಾನ್ಯ ಜ್ಞಾನಗಳು ದೊರೆಯಲಿದೆ. ಇದು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಸಹಕಾರಿಯಾಗಲಿದೆ ಎಂದರು.
ಜಯಪುರ ರೋಟರಿ ಕ್ಲಬ್ ಅಧ್ಯಕ್ಷ ಡಿ.ಎನ್.ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಸಹ ಪಠ್ಯ ಚಟುವಟಿಕೆಗಳನ್ನು ನಡೆಸುವುದರಿಂದ ಅವರಲ್ಲಿ ಸ್ಫೂರ್ತಿ ಹೆಚ್ಚಲಿದ್ದು, ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಹಲವು ರೀತಿಯಲ್ಲಿ ಪ್ರೋತ್ಸಾಹ ನೀಡಲಿದೆ ಎಂದರು.


ವಿದ್ಯಾಲಯದ ಪ್ರಾಚಾರ್ಯೆ ರೇಖಾ ಅಶೋಕ್ ಮಾತನಾಡಿ, ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ವಿದ್ಯಾರ್ಥಿಗಳಿಗಾಗಿ ವಿಭಿನ್ನ ರೀತಿಯ ರಸಪ್ರಶ್ನಾ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಅಂಜಿಕೆ, ಅಳುಕಿಲ್ಲದೆ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಬೇಕಿದೆ ಎಂದರು.
ರಸಪ್ರಶ್ನೆ ಸ್ಪರ್ಧೆಯಲ್ಲಿ ಶಿವಾಲಿಕ್ ಸೋಲ್ರ‍್ಸ್ ತಂಡ ಪ್ರಥಮ, ಉದಯಗಿರಿ ಯೋದಾಸ್ ತಂಡ ದ್ವಿತೀಯ, ನೀಲಗಿರಿ ನೈಟ್ ರೈರ‍್ಸ್ ತಂಡ ತೃತೀಯ, ಅರಾವಳಿ ಚಾಲೆಂರ‍್ಸ್ ತಂಡ ಚತುರ್ಥ ಸ್ಥಾನ ಪಡೆದರು.
ಹೇರೂರು ಗ್ರಾಪಂ ಅಧ್ಯಕ್ಷ ಎಚ್.ಸಿ.ಅಶ್ವಥ್, ಕಾಫಿ ಬೆಳೆಗಾರ ಡಿ.ಎನ್.ಸುಧಾಕರ್ ದಿಡಿಗೆಮನೆ, ಎನ್.ಆರ್.ಪುರ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಚೈತನ್ಯ ವೆಂಕಿ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎಸ್.ಸಚಿನ್‌ಕುಮಾರ್, ಕಾರ್ಯದರ್ಶಿ ಬಿ.ಎಸ್.ನಾಗರಾಜ್‌ಭಟ್, ಇನ್ನರ್‌ವ್ಹೀಲ್ ಕ್ಲಬ್ ಮಾಜಿ ಕಾರ್ಯದರ್ಶಿ ಕಾಂಚನಾ, ಸ್ನೇಹಕೂಟ ಸ್ವ ಸಹಾಯ ಸಂಘದ ಅಧ್ಯಕ್ಷೆ ವರ್ಷಾ, ಉಪ ಪ್ರಾಚಾರ್ಯ ಶಶಿಕುಮಾರ್, ಉಪನ್ಯಾಸಕರಾದ ಎ.ಪಿ.ನಾಗರಾಜ್, ದೊರೆರಾಜ್, ಜೇಸಿಐ ಸದಸ್ಯ ವಿ.ಅಶೋಕ್ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

Scan the code