ನ್ಯೂಸ್ಶಿವಮೊಗ್ಗ

ಸಾಗರ ತಾಲೂಕು ಮಟ್ಟದ ಕ್ರೀಡಾಕೂಟ: ಶೆಡ್ತೀಕೆರೆ ಶಾಲೆಗೆ ಸಮಗ್ರ ಪ್ರಶಸ್ತಿ

ಸಾಗರ ತಾಲೂಕು ಮಟ್ಟದ ಕ್ರೀಡಾಕೂಟ: ಶೆಡ್ತೀಕೆರೆ ಶಾಲೆಗೆ ಸಮಗ್ರ ಪ್ರಶಸ್ತಿ

(SHIVAMOGA): ಪಟ್ಟಣದ ನೆಹರೂ ಮೈದಾನದಲ್ಲಿ ಸೆ. 20 ಮತ್ತು 21ರಂದು ನಡೆದ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ (14 ವರ್ಷದೊಳಗಿನವರ ವಿಭಾಗ) ತಾಲೂಕಿನ ಶೆಡ್ತೀಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 7ನೇ ತರಗತಿಯ ದೀಕ್ಷಿಲ್ ಕುಮಾರ್ ಎತ್ತರ ಜಿಗಿತ, ಉದ್ದ ಜಿಗಿತ, ಗುಂಡು ಎಸೆತ, 400 ಮೀ. ಹಾಗೂ 600 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ, ಬಾಲಕರ ವಿಭಾಗದ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡರು.


ಇದೇ ಶಾಲೆಯ ಒಟ್ಟು 11 ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಸಾಧನೆಗೈದಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಕ ಮೂರ್ತಿಯವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ. ಇವರೆಲ್ಲರ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ, ಎಲ್ಲ ಸದಸ್ಯರು, ಶಿಕ್ಷಕ ವೃಂದ ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ವರದಿ: ರಾಘವೇಂದ್ರ ತಾಳಗುಪ್ಪ

Leave a Reply

Your email address will not be published. Required fields are marked *

Scan the code