ಬ್ಯಾಡ್ಮಿಂಟನ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
(SHIVAMOGA): ರಾಮನಗರದಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರೌಢಶಾಲೆಗಳ 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಸಾಂದೀಪನಿ ಆಂಗ್ಲ ಶಾಲೆಯ 10ನೇ ತರಗತಿಯ ವಿಭಾ.ಜಿ.ಎಂ, 9ನೇ ತರಗತಿಯ ಅನ್ವಿತ.ಎಸ್.ಪಿ ಮತ್ತು ಪಾವನಿಸಿಂಗ್ ಈ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ರಾಜ್ಯ ಮಟ್ಟದ ಸ್ಫರ್ಧೆಯು ಕನಕಪುರದಲ್ಲಿ ನಡೆಯಲಿದೆ.
ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ, ಸಿಬ್ಬಂದಿ ವರ್ಗದವರು ಶುಭಹಾರೈಸಿದ್ದಾರೆ.