ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜಯಗಳಿಸಿದ ಜೆಡಿಎಸ್ ನ ಎಸ್ ಎಲ್ ಭೋಜೇಗೌಡ ಹೇಳಿಕೆ.
(SHIVAMOGA): ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಪೂಜೆ ಕೂಡ ಎರಡನೇ ಬಾರಿ ಗೆಲುವು ದಾಖಲಿಸಿದ್ದಾರೆ. ಈ ಬಾರಿ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಬಹಳ ಅಭೂತಪೂರ್ವ ಗೆಲುವನ್ನು ತಂದು ಕೊಟ್ಟಿದ್ದಾರೆ. ಹಾಗಾಗಿ ಈ ಗೆಲುವನ್ನು ಶಿಕ್ಷಕ ಸಮುದಾಯಕ್ಕೆ ಸರ್ಮಪಿಸುತ್ತೇನೆ. ನಮ್ಮ ಶಿಕ್ಷಕರು ಬಹಳ ಶ್ರಮಪಟ್ಟು ಗೆಲುವನ್ನು ತಂದುಕೊಟ್ಟಿದ್ದಾರೆ. ಬಹಳ ವಿಶ್ವಾಸವಿಟ್ಟು ಮೊದಲ ಪ್ರಾಶಸ್ತ್ಯ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ.
ಹಾಗಾಗಿ ನನ್ನ ಗೆಲುವನ್ನು ಅವರಿಗೆ ಅರ್ಪಿಸುತ್ತೇನೆ.
ಈ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿತ್ತು, ಅದರಂತೆಯೇ ಆಗಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಒಂದಾಗಿದ್ದರಿಂದ ನಮ್ಮ ಬಲ ಹೆಚ್ಚಾಗಿದೆ.
ಹೊಂದಾಣಿಕೆ ಕೆಲಸ ಮಾಡಿದೆ. ಕಳೆದ ಬಾರಿಯೇ ನಾನು ಜೆಡಿಎಸ್ ನಿಂದ ಏಕಾಂಗಿಯಾಗಿ ನಿಂತು ಗೆದ್ದಿದ್ದೆ. ಈ ಬಾರಿ ಬಿಜೆಪಿ ಜೊತೆಗಿನ ಹೊಂದಾಣಿಕೆಯಿಂದ ಬಲ ಇನ್ನಷ್ಟು ಹೆಚ್ಚಿದೆ.
ಬಿಜೆಪಿ ಜೆಡಿಎಸ್ ಮೈತ್ರಿ ಫಲಪ್ರದವಾಗಿದೆ. ಬಿಜೆಪಿ ಜೆಡಿಎಸ್ ನ ಎಲ್ಲಾ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.
ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜಯಗಳಿಸಿದ ಬಳಿಕ ಜೆಡಿಎಸ್ ನ ಎಸ್ ಎಲ್ ಭೋಜೇಗೌಡರು ಹೇಳಿಕೆ ನೀಡಿದ್ದಾರೆ.
ವರದಿ: ರಾಘವೇಂದ್ರ ತಾಳಗುಪ್ಪ