ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಹೊಸ್ತಿಲು ಹುಣ್ಣಿಮೆ
(SHIVAMOGA): ಚಂದ್ರಗುತ್ತಿ: ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಹೊಸ್ತಿಲು ಹುಣ್ಣಿಮೆ ನಿಮಿತ್ತ ಭಾನುವಾರ ಸಾವಿರಾರು ಭಕ್ತರು ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ತಾಲೂಕು ಸೇರಿದಂತೆ ಹರಿಹರ, ಹಾವೇರಿ, ಹಾನಗಲ್, ಶಿವಮೊಗ್ಗ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಹಿರೇಕೆರೂರು, ಬ್ಯಾಡಗಿ, ರಾಣೆಬೆನ್ನೂರು, ಚಿಕ್ಕಮಂಗಳೂರು, ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಭಕ್ತರ ಆರಾಧ್ಯ ದೇವತೆ ಶ್ರೀ ರೇಣುಕಾದೇವಿಯ ದರ್ಶನ ಪಡೆದು ಉಧೋ ಉಧೋ. ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು,
ಹೊಸ್ತಿಲ ಹುಣ್ಣಿಮೆ ನಿಮಿತ್ತ ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ, ತ್ರಿಶೂಲದ ಬೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು,
ದೇವಿಯ ಹೆಸರಿನಲ್ಲಿ ಭಕ್ತರು ಧಾರ್ಮಿಕ ಪೂಜಾ ವಿಧಿ ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವುದು, ಹಾಗೂ ವಿವಿಧ ಸೇವೆ, ಹರಿಕೆ, ಮುಂತಾದವುಗಳನ್ನು ಆಚರಿಸಿದರು,
ವರದಿ: ಮಧು ರಾಮ್ ಸೊರಬ