ಕೋಲಾರನ್ಯೂಸ್

ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆಯ ಅವಧಿಯನ್ನು ಪರಿಶೀಲಿಸಬೇಕು

ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆಯ ಅವಧಿಯನ್ನು ಪರಿಶೀಲಿಸಬೇಕು

(KOLARA): ಬಂಗಾರಪೇಟೆ :ಗ್ರಾಹಕರ ಸುರಕ್ಷತೆ ಕಾಯ್ದೆಯ ಪ್ರಕಾರ ಗ್ರಾಹಕರಾಗಿ ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆಯ ಅವಧಿಯನ್ನು ಪರಿಶೀಲಿಸಬೇಕು ಎಂದು ವಕೀಲರ ಸಂಘದ ಅಧ್ಯಕ್ಷ ಎಸ್. ನಾರಾಯಣಪ್ಪ ಹೇಳಿದರು.

ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ ಬಂಗಾರಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ, ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿ,ಇದು 1988 ರಲ್ಲಿ ಗ್ರಾಹಕ ಸಂರಕ್ಷಣಾ ಕಾಯಿದೆಯಡಿಯಲ್ಲಿ ಜಾರಿಗೆ ತರಲಾಯಿತು. ಡಿಸೆಂಬರ್ 24, 1986ರಲ್ಲಿ ಅಧಿಕೃತವಾಗಿ ಭಾರತದಲ್ಲಿ ವಿಶ್ವ ಗ್ರಾಹಕರ ದಿನವನ್ನು ಆಚರಣೆಗೆ ತರಲಾಯಿತು. ಭಾರತದಲ್ಲಿ ಡಿಸೆಂಬರ್ 24 ನ್ನು ಗ್ರಾಹಕ ಹಕ್ಕುಗಳ ದಿನವಾಗಿ ಆಚರಿಸಲಾಗುತ್ತದೆ ಎಂದುರು.

ಹಿರಿಯ ವಕೀಲರಾದ ಅಮರೇಶ್ ಮಾತನಾಡಿ,ಸಮಾಜದ ಪ್ರತಿಯೊಬ್ಬರೂ ಕಡ್ಡಾಯವಾಗಿ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಬೇಕು. ಇದರಿಂದ ವಂಚನೆಗೆ ಒಳಗಾಗದೆ ಜಾಗೃತವಾಗಿರಬಹುದು ಎಂದರು.ಗ್ರಾಹಕರಿಗೆ ಮಾರಾಟವಾಗುವ ಪ್ರತಿ ವಸ್ತು, ಸರಕು ಮತ್ತು ಸೇವೆಗಳ ಮೌಲ್ಯ, ವೆಚ್ಚ ಹಾಗೂ ಗುಣಮಟ್ಟದ ಬಗ್ಗೆ ಸಂಪೂರ್ಣ ಮಾಹಿತಿ ಗ್ರಾಹಕರಿಗೆ ಸಿಗಬೇಕು.ಗ್ರಾಹಕರ ಹಕ್ಕುಗಳನ್ನು ತಿಳಿಸುವ ಉದ್ದೇಶದಿಂದ ಗ್ರಾಹಕ ದಿನಾಚರಣೆ ಮಾಡಲಾಗುತ್ತಿದೆ ಎಂದರು.

ಗ್ರಾಹಕರ ಸಂರಕ್ಷಣಾ ಕಾಯ್ದೆಯಡಿ ದೂರುಗಳನ್ನು ಪ್ರತಿ ಜಿಲ್ಲೆಯಲ್ಲಿರುವ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಲ್ಲಿಸಬಹುದು. ಗ್ರಾಹಕರಿಗೆ ಸರಕುಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕು, ಶಿಕ್ಷಣ ಮತ್ತು ವ್ಯವಹಾರದ ಜಾಗೃತಿ ಹಕ್ಕು, ಅವಧಿ ಮುಗಿದ ಸರಕುಗಳ ಬಗ್ಗೆ ದೂರು ನೀಡುವ ಹಕ್ಕುಗಳನ್ನು ಕಾಯ್ದೆ ನೀಡಿದೆ.2019ರ ಕಾಯ್ದೆ ಪ್ರಕಾರ ಗ್ರಾಹಕರು ದೂರುಗಳನ್ನು ಆನ್‌ಲೈನ್ ಮುಖಾಂತರವೂ ನೀಡಬಹುದು. ದೂರಿನನ್ವಯ ಪ್ರಕರಣ ದಾಖಲಿಸಿಂಡು ಸೂಕ್ತ ನ್ಯಾಯ ಒದಗಿಸುವ ಅಧಿಕಾರವನ್ನು ಆಯೋಗ ಹೊಂದಿದೆ ಎಂದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿ ಪ್ರತಿಭಾ,,
ಹಿರಿಯ ವಕೀಲರಾದ ರಮೇಶ್, ಎಪಿಎಂಸಿ ಕಾರ್ಯದರ್ಶಿ ಶ್ರೀನಿವಾಸ್ ಹಾಗೂ ಮೊದಲಾದವರು ಇದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code