ಪೌಷ್ಠಿಕಾಂಶ ಕೊರತೆ ಆಗಲೇಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಡವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ.
(KOLARA): ಬಂಗಾರಪೇಟೆ :ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮವನ್ನು ಸರ್ಕಾರ ದಿಂದ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಠಿಕಾಂಶ ಕೊರತೆ ಆಗಲೇಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಡವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ ಎಂದು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕರಾದ ಎಸ್ಎನ್ ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ಸರ್ಕಾರದ ನೂತನ ಕಾರ್ಯಕ್ರಮವಾದ ಸಾಯಿ ಶೂರ್ ಹೆಲ್ತ್ ಮಿಕ್ಸ್ ವಿತರಣೆಯ ತಾಲೂಕು ಮಟ್ಟದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡುತ್ತಾ,ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎಂದರು.
ಈಗಾಗಲೇ ನಮ್ಮ ಸರ್ಕಾರ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ, ವಾರದಲ್ಲಿ ಎರಡು ಬಾರಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ ಮಾಡುತ್ತಿದ್ದೇವು ಈಗ ವಿನೂತನವಾಗಿ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮವನ್ನು ಆರಂಭಿಸಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದರು.
ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡಗಳನ್ನು ನೆಲಸಮ ಮಾಡಿ ನೂತನವಾಗಿ ನನ್ನ ಅನುದಾನದಿಂದ ಕಟ್ಟಡಗಳನ್ನು ಕಟ್ಟಿಸಿ ಕೊಡುವೆ ಹಾಗೂ ಪುರಸಭೆ ವತಿಯಿಂದ ಶೌಚಾಲಯಗಳನ್ನು ನಿರ್ಮಿಸಿ ಕೊಡುವೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯ ಅಧಿಕಾರಿ ಮೀನಾಕ್ಷಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯ, ಬಿಸಿಯೂಟದ ನಿರ್ದೇಶಕರಾದ ಯುವರಾಜ್, ಮುಖ್ಯ ಶಿಕ್ಷಕರದ ಕೃಷ್ಣಪ್ಪ, ಶಿಕ್ಷಕರಾದ ವಿಜಿ ಕುಮಾರ್ ಹಾಗೂ ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ