ಕೋಲಾರನ್ಯೂಸ್

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಷ ನೀರು ಸೇವಿಸಿ ಮೂವರು ವಿದ್ಯಾರ್ಥಿಗಳು ಆಸ್ಪತ್ರೆ ದಾಖಲು

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಷ ನೀರು ಸೇವಿಸಿ ಮೂವರು ವಿದ್ಯಾರ್ಥಿಗಳು ಆಸ್ಪತ್ರೆ ದಾಖಲು

(ಕೋಲಾರ): ಬಂಗಾರಪೇಟೆ: ತಾಲೂಕಿನ ಡಿಪಿ ಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಷ ನೀರು ಸೇವಿಸಿ ಮೂವರು ವಿದ್ಯಾರ್ಥಿಗಳು ಆಸ್ಪತ್ರೆ ದಾಖಲಾಗಿರುವ ಘಟನೆ ನಡೆದಿದೆ.

ಇಂದು ಮಧ್ಯಾಹ್ನ ವಸತಿ ಶಾಲೆಯಲ್ಲಿ ನಿರ್ಮಿಸಿದ್ದ ವಾಟರ್ ಫಿಲ್ಟರ್ ನಲ್ಲಿ ಇಲಿ ಪಾಷಾಣ ಬಿದ್ದಿರುವ ಘಟನೆಯಿಂದ ಸಂಪೂರ್ಣ ನೀರು ವಿಷವಾದ ಹಿನ್ನೆಲೆ ಮೂರು ವಿದ್ಯಾರ್ಥಿಗಳು ನೀರನ್ನು ಸೇವಿಸಿ ಪ್ರಜ್ಞೆ ಕಳೆದುಕೊಂಡಿದ್ದಾರೆ.

ವಿದ್ಯಾರ್ಥಿಗಳು ಕೆಳಗೆ ಬಿದ್ದಿದ್ದನ್ನು ಗಮನಿಸಿದ ಶಿಕ್ಷಕರು ವಿದ್ಯಾರ್ಥಿಗಳನ್ನು ತಕ್ಷಣ ಕೋಲಾರದ ಜಾಲಪ್ಪ ಆಸ್ಪತ್ರೆಗೆ ರವಾನಿಸಿದ್ದಾರೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿ ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code