ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿ, ಅರಣ್ಯ ಇಲಾಖೆಯ ಸಿಬ್ಬಂದಿ ಸಾವು
(KOLARA): ಬಂಗಾರಪೇಟೆ :ಪಟ್ಟಣದ ಬೂದಿಕೋಟೆ ರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿರುವ ಪರಿಣಾಮ ಅರಣ್ಯ ಇಲಾಖೆಯ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ದುರ್ದೈವಿ ರಾಜಪ್ಪ 45 ವರ್ಷ ಮೂಲತಹ ಟೇಕಲ್ ಹೋಬಳಿಯ ಕುಂಟನಹಳ್ಳಿ ಗ್ರಾಮದವರೆಂದು ತಿಳಿದು ಬಂದಿದೆ. ಇವರು ತಾಲೂಕಿನ ಕಾಮಸಮುದ್ರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕ್ಷೇಮಾವೃದ್ಧಿ ದಿನಗೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಇಂದು ಕರ್ತವ್ಯಕ್ಕೆ ಬರುವ ಸಮಯದಲ್ಲಿ ಈ ಒಂದು ದುರ್ಘಟನೆ ನಡೆದಿದೆ.
ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ವಿಷ್ಣು ಕೋಲಾರ