ಅವಳಿಗಳಾದ ರುಜ್ವಲ್ ಮಳಲಿ ಎನ್.ಕೆ ಮತ್ತು ರುಜುಲಾ ಮಳಲಿ ಎನ್.ಕೆ ವಿಭಾಗೀಯ ಮಟ್ಟಕ್ಕೆ ಆಯ್ಕೆ.
(SHIVAMOGA): ಲಯನ್ಸ್ ಕ್ಲಬ್ ಶುಗರ್ ಟೌನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಭದ್ರಾವತಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2024-25 ನೇ ಸಾಲಿನ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಪ್ರೌಢಶಾಲೆಯ ವಿದ್ಯಾರ್ಥಿಗಳ ಯೋಗಾಸನ ಸ್ಪರ್ಧೆಯಲ್ಲಿ ಶಿವಮೊಗ್ಗದ ಸಾಂದೀಪನಿ ಆಂಗ್ಲ ಶಾಲೆಯ 8ನೇ ತರಗತಿ ಓದುತ್ತಿರುವ ಅವಳಿಗಳಾದ ರುಜ್ವಲ್ ಮಳಲಿ ಎನ್.ಕೆ ಮತ್ತು ರುಜುಲಾ ಮಳಲಿ ಎನ್.ಕೆ ಇವರಿಬ್ಬರು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಇದೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ನಡೆಯಲಿರುವ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ಮೊದಲ ಬಾರಿಗೆ ಅವಳಿಗಳು ಯೋಗಾಸನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿರುವುದು. ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಈ ಪ್ರತಿಭಾವಂತ ಅವಳಿಗಳಿಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸವರ್ಮ, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಶುಭಹಾರೈಸಿದ್ದಾರೆ.