ಕಾಫಿ ನಾಡಿನಲ್ಲಿ ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಇಬ್ಬರು ಅರ್ಚಕರ ಬಂಧನ.
(CHIKKAMAGLURU): ಚಿಕ್ಕಮಗಳೂರು: ಹುಲಿಯ ಗರ್ಜನೆ ಎಲ್ಲೆಡೆ ಸದ್ದು ಮಾಡುತ್ತಿದ್ದು. ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು, ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ.
ಹುಲಿ ಉಗುರು ಪೆಂಡೆಂಟ್ ಧರಿಸಿದ್ದರಿಂದ ಅವರನ್ನು ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ.