ಕೈ ಹಿಡಿದ ಮತದಾರ, ಮೈತ್ರಿಕೂಟಕ್ಕೆ ಹಿನ್ನಡೆ.
(KOLARA): ಬಂಗಾರಪೇಟೆ: ರಾಜಕೀಯ ಪ್ರತಿಷ್ಠೆಯ ಕಣವಾಗಿದ್ದ ಮೂರೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪ್ರಬುದ್ಧ ಮತದಾರರು ಕಾಂಗ್ರೆಸ್ ಪಕ್ಷಧ “ಕೈ” ಹಿಡಿಯುವುದರ ಮೂಲಕ ವಿಜಯಮಾಲೆ ಅರ್ಪಿಸಿದ್ದಾರೆ ಇದರೊಟ್ಟಿಗೆ ಸುಳ್ಳು ಅಪಪ್ರಚಾರ ಮಾಡುತ್ತಿದ್ದ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ ಎಂದು ಶಾಸಕ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ಪಟ್ಟಣದ ಕುವೆಂಪು ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷದ ಯಶಸ್ಸನ್ನು ಸಹಿಸದೆ ಸುಳ್ಳು ಅಪಪ್ರಚಾರ ಮಾಡುತ್ತಿದ್ದರು ಆದರೆ ಪ್ರಜ್ಞಾವಂತ ಮತದಾರರು ಮೈತ್ರಿಕೂಟಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದರು.
ಅಪಪ್ರಚಾರಕ್ಕೆ ತಕ್ಕ ಉತ್ತರ, ಕೈಹಿಡಿದ ಗ್ಯಾರಂಟಿ ಯೋಜನೆ:
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಬೋರ್ಡ್ ಮುಖಾಂತರ ಬಡವರ ದಲಿತರ ಮತ್ತು ಹಿಂದೂ ದೇವಾಲಯಗಳ ಆಸ್ತಿಯನ್ನು ಕಬಲಿಸುತ್ತಿದೆ , ಮೂಡಾ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ, ಗ್ಯಾರೆಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ, ಎಂದು ಸುಳ್ಳು ಅಪಪ್ರಚಾರ ಮಾಡುವುದರ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು, ಆದರೆ ಮತದಾರರು ಅಪಪ್ರಚಾರಕ್ಕೆ ತಕ್ಕ ಉತ್ತರವನ್ನು ನೀಡಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಎಂದರು.
ಚಿದ್ರಗೊಂಡ ಭದ್ರಕೋಟೆ, ಮಾಜಿ ಮುಖ್ಯಮಂತ್ರಿಗಳಿಗೆ ಮುಖಭಂಗ:
ನಿರೀಕ್ಷೆಯಂತೆ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅನ್ನಪೂರ್ಣ ತುಕಾರಾಂ, ಶಿಗ್ಗಾವ್ ವಿಧಾನಸಭಾ ಕ್ಷೇತ್ರದಲ್ಲಿ ಯಾಸಿನ್ ಪಠಾನ್, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಿ ಪಿ ಯೋಗೇಶ್ವರ್ ಜಯಗಳಿಸುವುದು ಸಂತಸತಂದಿದೆ.
ಸತತ 30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಶಿಗ್ಗಾವ್ ವಿಧಾನಸಭಾ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ರವರ ಮಗ ಭರತ್ ಬೊಮ್ಮಾಯಿ ಸ್ಪರ್ಧಿಸಿದ್ದರು ಆದರೆ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದರ ಮೂಲಕ ಬಿಜೆಪಿಯ ಭದ್ರಕೋಟೆಯನ್ನು ಚಿದ್ರಗೊಳಿಸಿದರು, ಅದರಂತೆಯೇ ತೀವ್ರ ಜಿದ್ದಾಜಿದ್ದಿನ ರಾಜಕೀಯ ಕಣವಾಗಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಲಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ರವರ ಮಗ ನಿಖಿಲ್ ಕುಮಾರಸ್ವಾಮಿರವರು ಸ್ಪರ್ಧೆ ಮಾಡಿದರು ಆದರೆ ಮತದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಆಡಳಿತ ಕಾರ್ಯವೈಖರಿ ಮತ್ತು ಡಿ.ಕೆ ಶಿವಕುಮಾರ್ ರವರ ನಾಯಕತ್ವವನ್ನು ಬೆಂಬಲಿಸುವುದರ ಮೂಲಕ ಮೈತ್ರಿಕೂಟಕ್ಕೆ ಸೋಲುಂಡುವಂತೆ ಮಾಡಿದ್ದಾರೆ ಇದರಿಂದ ಮಾಜಿ ಮುಖ್ಯಮಂತ್ರಿಗಳಿಗೆ ತೀವ್ರ ಮುಜುಗರವಾಗಿದೆ ಎಂದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿಕ್ಸೂಚಿ:
ಪ್ರಸ್ತುತ ಕಾಂಗ್ರೆಸ್ ಪಕ್ಷದ ವಿಜಯೋತ್ಸವ ಮುಂಬರುವ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಪುರಸಭಾ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ, ಕಾಂಗ್ರೆಸ್ ಪಕ್ಷ ಸಮುದ್ರ ವಿದ್ದಂತೆ ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಿಂದ ಅನೇಕ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಪಾರ್ಥಸಾರಥಿ, ಪುರಸಭಾ ಅಧ್ಯಕ್ಷ ಗೋವಿಂದ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಕುಮಾರ್, ಪುರಸಭಾ ಸದಸ್ಯರಾದ ಶಂಸುದ್ದೀನ್ ಬಾಬು, ಬಾಳೆಹಣ್ಣು ವೆಂಕಟೇಶ್, ಶಾರದಾ ವಿವೇಕಾನಂದ, ಆಜಮ್, ಶಫಿ, ಅರುಣಾಚಲಂ ಮಣಿ, ನೈಮ್, ಪ್ರವೀಣ್, ಮುಖಂಡರಾದ ಮಹದೇವ್, ಹೆಚ್ ಕೆ ನಾರಾಯಣಸ್ವಾಮಿ, ಇತರರು ಉಪಸ್ಥಿತರಿದ್ದರು.
ವರದಿ:ವಿಷ್ಣು ಕೋಲಾರ